ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕರ್ನಾಟಕ ಪಬ್ಲಿಕ್ ಶಾಲೆ(ಕೆಪಿಎಸ್)ಗಳ ಪಿಯು ವಿದ್ಯಾರ್ಥಿಗಳಿಗೂ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂಬರುವ ಬಜೆಟ್ ನಲ್ಲಿ ಘೋಷಣೆ ಮಾಡಲಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಾರ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಯೋಜನೆ ಜಾರಿಗೆ ಬರಲಿದೆ. ಮುಂಬರುವ ರಾಜ್ಯ ಬಜೆಟ್ನಲ್ಲಿ ಈ ಬಗ್ಗೆ ಔಪಚಾರಿಕ ಘೋಷಣೆ ಮಾಡುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಈಗಾಗಲೇ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ನೀಡಲಾಗುತ್ತಿದೆ. ಆರ್ಥಿಕ ದುರ್ಬಲ ವರ್ಗಗಳ ಮಕ್ಕಳ ಹಾಜರಾತಿ ಸುಧಾರಿಸುವ ಹಾಗೂ ಶಾಲೆ ಬಿಡುವುದನ್ನು ಕಡಿಮೆ ಮಾಡಲು ಈ ಯೋಜನೆ ವಿಸ್ತರಣೆ ಮಾಡಲಾಗಿದೆ.
ಇತ್ತೀಚಿನ ಸರ್ಕಾರದ ನಿರ್ಧಾರದಂತೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ಯಾಂಪಸ್ಗಳಲ್ಲಿ ಓದುತ್ತಿರುವ ಪಿಯು ವಿದ್ಯಾರ್ಥಿಗಳೂ ಸಹ ಮುಂದಿನ ಶೈಕ್ಷಣಿಕ ವರ್ಷದಿಂದ ಮಧ್ಯಾಹ್ನದ ಊಟ ಪಡೆಯಲಿದ್ದಾರೆ. ಸಿಎಂ ಜತೆ ಚರ್ಚಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಜೆಟ್ನಲ್ಲಿ ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ”ಎಂದು ತಿಳಿಸಿದರು.
“ಫಲಾನುಭವಿಗಳ ಸಂಖ್ಯೆ ಹಾಗೂ ಅದರ ಹಣಕಾಸಿನ ಪರಿಣಾಮದ ಕುರಿತು ನನ್ನ ಮಟ್ಟದಲ್ಲಿ ಅಂಕಿ ಅಂಶಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಮಾರ್ಚ್ ಮೊದಲ ವಾರದಲ್ಲಿ ತಾತ್ಕಾಲಿಕವಾಗಿ ನಿಗದಿಪಡಿಸಲಾದ ಬಜೆಟ್ನಲ್ಲಿ ಮುಖ್ಯಮಂತ್ರಿಗಳು ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದರು.

