ರಾಜಕೀಯ ಸುದ್ದಿ

ಖರ್ಗೆ ಭರವಸೆ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿಕೆ; ಬಹಳ ಸಂತೋಷ: ಡಿಸಿಎಂ ಡಿ.ಕೆ. ಶಿವಕುಮಾರ್

Share It

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುತ್ತೇವೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂಬ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ‘ಬಹಳ ಸಂತೋಷ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾ ಪ್ರತಿಕ್ರಿಯೆ ನೀಡಿದರು. ಇನ್ನು ಸಿಎಂ ಅವರ ಲೇಖನ ಹಾಗೂ ಟ್ವಿಟರ್ ಪೋಸ್ಟ್ ಬಗ್ಗೆ ಕೇಳಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದರು.

ಬಾಗಲಕೋಟೆ ಗಲಭೆ ಬಗ್ಗೆ ಕೇಳಿದಾಗ, “ನಿರಂತರ ಸಭೆಗಳ ಬಳಿಕ ಅಸ್ಸಾಂನಿಂದ ನಿನ್ನೆ ತಡ ರಾತ್ರಿ ನಾನು ಬೆಂಗಳೂರಿಗೆ ಮರಳಿದ್ದೇನೆ. ಬಹಳ ಆಯಾಸವಾಗಿದೆ. ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ” ಎಂದು ಹೇಳಿದರು.

ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ದು, ಪರಿಹಾರ ನೀಡಲಾಗುವುದೇ ಎಂದು ಕೇಳಿದಾಗ, “ಈ ಬಗ್ಗೆ ಅಧಿಕಾರಿಗಳು ನಮಗೆ ವರದಿ ನೀಡಲಿದ್ದು, ನಂತರ ತೀರ್ಮಾನ ಮಾಡುತ್ತೇವೆ” ಎಂದರು.

ಘನತ್ಯಾಜ್ಯ ನಿರ್ವಹಣೆ ವಿಚಾರದಲ್ಲಿ ನಾನು ಒಂದು ರೂ. ಅನುದಾನ ಕೇಳಿಲ್ಲ ಎಂಬ ಶಾಸಕ ಧೀರಜ್ ಮುನಿರಾಜು ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಬಗ್ಗೆ ಮುಂದೆ ಮಾತನಾಡೋಣ” ಎಂದರು.


Share It

You cannot copy content of this page