ಚಿಕ್ಕಮಗಳೂರು: ಕಾಡಾನೆ ದಾಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಹೊಸಪೇಟೆ ಮೂಲದ ಬೋರಮ್ಮ (34) ಮೃತಪಟ್ಟಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಪುರ ಬಳಿಯ ಕಡಬಗೆರೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಬೋರಮ್ಮ ಆನೆ ದಾಳಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದಷ್ಟೇ ಇದೇ ತೋಟದಲ್ಲಿ ಹಾವೇರಿ ಮೂಲದ ಕಾರ್ಮಿಕನೊಬ್ಬ ಕಾಡಾನೆ ದಾಳಿಗೆ ಬಲಿಯಾಗಿದ್ದ.
ಕಾಡಾನೆಯ ಸೆರೆಗೆ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿಯೇ ಆನೆ ಬೋರಮ್ಮನನ್ನು ಬಲಿ ಪಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಏಳು ಕುಮ್ಕಿ ಆನೆಗಳೊಂದಿಗೆ ಕಾಡಾನೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕಾಡಾನೆ ದಾಳಿಗೆ ಮಹಿಳೆ ಮಲಿಯಾಗಿದ್ದಾರೆ.
ಘಟನೆಯ ನಂತರ ಬೋರಮ್ಮ ಶವವನ್ನು ರಸ್ತೆಯಲ್ಲಿಟ್ಟುಕೊಂಡು ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಮನವೊಲಿಸಲು ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಪ್ರಯತ್ನ ಮಾಡುತ್ತಿದ್ದು, ಪ್ರತಿಭಟನೆ ಮುಂದುವರಿದಿದೆ.

