ಅಪರಾಧ ರಾಜಕೀಯ ಸುದ್ದಿ

ಎಐ ಸಮ್ಮೇಳನದಲ್ಲಿ ಅರೆಬೆತ್ತಲೆ ಪ್ರತಿಭಟನೆ: ಮತ್ತೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಬಂಧನ

Share It

ಬೆಂಗಳೂರು: ಎಐ ಸಮ್ಮೇಳನದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು, ಮಧ್ಯಪ್ರದೇಶದ ಗ್ವಾಲಿಯರ್‌ನಿಂದ ಕಾಂಗ್ರೆಸ್ ಮುಖಂಡ ದೇವೇಂದ್ರ ಯಾದವ್ ನನ್ನು ಬಂಧಿಸಿದ್ದಾರೆ. ಈವರೆಗೆ ದೆಹಲಿ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ್ದಾರೆ.

ಎಐ ಸಮ್ಮೇಳನದಲ್ಲಿ ಚೀನಾದ ರೋಬಟ್ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಚೀನಾ ಟ್ವೀಟ್ ಮಾಡಿದ್ದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮ್ಮೇಳನಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ವೇಳೆ ಅರಬೆತ್ತಲೆಯಾಗಿ ಪ್ರತಿಭಟಿಸಿ, ಸರಕಾರವನ್ನು ಟೀಕಿಸುವ ಕೆಲಸ ಮಾಡಿದ್ದರು. ಹೀಗಾಗಿ, ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share It

You cannot copy content of this page