ಸುದ್ದಿ

2nd ಪಿಯುಸಿ ಪರೀಕ್ಷೆ: KSRTC ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುಮತಿ

Share It

ಹುಬ್ಬಳ್ಳಿ: ಫೆ. 28 ರಿಂದ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆ ಹೊರತಾಗಿ ಇತರ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ವಿದ್ಯಾರ್ಥಿಗಳ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಸಾರಿಗೆ ಸಂಸ್ಥೆ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆ.28 ರಿಂದ ಮಾ.17 ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಪ್ರಯಾಣ ಮಾಡಬಹುದಾಗಿದೆ.

ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷೆ ಮುಗಿಸಿ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ನಗರ, ಉಪನಗರ, ಸಾಮಾನ್ಯ ಹಾಗೂ ವೇಗದೂತ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಇದನ್ನು ಅರ್ಹ ವಿದ್ಯಾರ್ಥಿಗಳು ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.

ದ್ವಿತೀಯು ಪಿಯುಸಿ ಪರೀಕ್ಷೆ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. 5,174 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಏ.25ರಿಂದ ಮೇ 9ರವರೆಗೆ ಪರೀಕ್ಷೆ-2 ನಡೆಯಲಿದೆ. ಅದೇ ರೀತಿ ಎಸ್​ಎಸ್​ಎಲ್​ಸಿ ಪರೀಕ್ಷೆ – 2ರ ಮೇ 18ರಿಂದ 25ರವರೆಗೆ ನಡೆಯಲಿದೆ. 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ ಮೊದಲ ವಾರದಲ್ಲಿ ಅಂತಿಮ ಪ್ರವೇಶ ಪತ್ರ ನೀಡಲಾಗುವುದು ಎಂದು ಮಾಹಿತಿ ನೀಡಿದರು.


Share It

You cannot copy content of this page