ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 144 BS-VI ನಗರ ಸಾರಿಗೆ ಡೀಸೆಲ್ ಬಸ್ಸುಗಳನ್ನು ಖರೀದಿಸಲು ಸರಕಾರ ತೀರ್ಮಾನಿಸಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ಖರೀದಿ ಮಾಡುವ ಸಲುವಾಗಿ 62.00 ಕೋಟಿ ರುಪಾಯಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೊಸ ಬಸ್ ಗಳ ಖರೀದಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಸರಕಾರ ಸಿದ್ದರಾಮಯ್ಯ ಡೀಸೆಲ್ ಬಸ್ ಖರೀದಿಗೆ ಅನುದಾನ ನಿಗದಿ ಮಾಡಿ ಸಂಪುಟ ಒಪ್ಪಿಗೆ ನೀಡಿದೆ.

