ಉಪಯುಕ್ತ ಸುದ್ದಿ

ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಸಿಎಂ ಕೊಡುಗೆ: 62 ಹೊಸ ಹಾಸ್ಟೆಲ್‌ಗಳ ನಿರ್ಮಾಣ

Share It

ಬೆಂಗಳೂರು: ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು 62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ ಮಾಡಲು ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳ ಸ್ಥಾಪನೆ ಮಾಡಲು ತೀರ್ಮಾನಿಸಲಾಗಿದೆ.

ಕ್ರೈಸ್ ವಸತಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ.


Share It

You cannot copy content of this page