ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಸರಕಾರ ಬಜೆಟ್‌ನಲ್ಲಿ ಸೀರೆ ಕೊಡುವುದಾಗಿ ಘೋಷಿಸಿರುವುದುಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಪ್ರೀಢಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಅಂಗನವಾಡಿ ಕಾರ್ಯಕರ್ತೆಯರು ಸರಕಾರ ಬಜೆಟ್ ನಲ್ಲಿ ಘೋಷಣೆ ಮಾಡಿದ ಸೀರೆ ನೀಡುವಿಕೆಯ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ನ್ಯಾಯಯುತ ಬೇಡಿಕೆಗಳಾದ ಗ್ರಾಚ್ಯುಟಿ ನೀಡುವುದು, ವೇತನ ಹೆಚ್ಚಳದಂತ ಸೌಲಭ್ಯಗಳನ್ನು ನೀಡಲಿ ಎಂದು ಆಗ್ರಹಿಸಿದ್ದಾರೆ.
ಸೀರೆಯನ್ನು ಸರಕಾರ ಕೊಡುವ ಅವಶ್ಯಕತೆಯಿಲ್ಲ. ಒಂದು ವೇಳೆ ಕೊಟ್ಟರೂ ಅದನ್ನು ಬಜೆಟ್‌ನಲ್ಲಿ ಘೊಷಣೆ ಮಾಡಿ ನೀಡುವ ಅಗತ್ಯವಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ಕೈಲಿ ಸರಕಾರದ ಎಲ್ಲ ಯೋಜನೆಗಳ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಸರಕಾರ ಸೌಲಭ್ಯ ನೀಡುವಲ್ಲಿ ಮಾತ್ರ ಮೀನಾಮೇಷ ಎಣಿಸುತ್ತಿದೆ ಎಂದು ಕಿಡಿಕಾರಿದರು.

