ಬೆAಗಳೂರು: ಬಹುನಿರೀಕ್ಷಿತ ಐಪಿಎಲ್ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿಯೇ ನಡೆಯಲಿದೆ. ರಾಯಲ್ ಚಾಲೆಂರ‍್ಸ್ ಬೆಂಗಳೂರು ಮತ್ತು ಸನ್ ರೈರ‍್ಸ್ ಹೈದರಾಬಾದ್ ತಂಡಗಳು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಮಾರ್ಚ್ ೨೮ಕ್ಕೆ ಉದ್ಘಾಟನಾ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಚಿನ್ನಸ್ವಾಮಿ ಕಾಲ್ತುಳಿತದ ನಂತರ ಐಪಿಎಲ್ ಪಂದ್ಯಾವಳಿ ನಡೆಯುವುದೇ ಅನುಮಾನ ಎಂಬ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಕೆಎಸ್‌ಸಿಎ ನಡೆಸಿದ ಸತತ ಪ್ರಯತ್ನದ ಫಲವಾಗಿ ಸರಕಾರ ಪಂದ್ಯ ಆಯೋಜನೆಗೆ ಅನುಮತಿ ನೀಡಿದೆ.
ಕರ್ನಾಟಕ ಸರಕಾರದ ಅನುಮತಿಯ ಮೇರೆಗೆ ಇದೀಗ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೊದಲ ಪಂದ್ಯವೇ ಬೆಂಗಳೂರಿನಲ್ಲಿ ನಡೆಯಲಿದೆ. ಚಾಂಪಿಯನ್ಸ್ಗಳಾದ ಆರ್‌ಸಿಬಿ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಆರ್‌ಸಿಬಿ ಮೂರು ತವರಿನ ಪಂದ್ಯಗಳನ್ನು ರಾಯಪುರದಲ್ಲಿ ಆಡಲಿದೆ. ಉಳಿದೆಲ್ಲ ತವರಿನ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ನಡೆಯಲಿವೆ.

