ಬೆಂಗಳೂರು: Excellence In Innovation ವರ್ಗದಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಧ್ವನಿಸ್ಪಂದನ ಉಪಕ್ರಮಕ್ಕೆ Governance now 12th (PSU)ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
KSRTCಯ ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಧ್ವನಿ ಸ್ಪಂದನ’–ಆನ್ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್* ಎಂಬ ಯೋಜನೆಯನ್ನು GiZ ಜರ್ಮನಿರವರ ಸಹಯೋಗದೊಂದಿಗೆ ಯಶಸ್ವಿಯಾಗಿ ಜಾರಿಗೆ ತರಲಾಗಿದ್ದು, ದೃಷ್ಟಿ ವಿಕಲ ಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ.
Governance Now ರವರು ದಿನಾಂಕ 11/03/2026 ರಂದು Hotel Eros, Nehru Place, ನವದೆಹಲಿಯಲ್ಲಿ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಾಯಿತ್ರಿ ಕೆ ಎಂ, ನಿರ್ದೇಶಕರು (ಸಿ ಮತ್ತು ಜಾ) ರವರು, ಕೈಲಾಶ್ ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು ಮತ್ತು ಅಮಿತ್ ಸಾದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

