ಅಪರಾಧ ಸುದ್ದಿ

ಮಡಿಕೇರಿ: ಕುಡಿದ ಮತ್ತಿನಲ್ಲಿ ಅಣ್ಣ-ತಂಗಿಯ ಜೋಡಿ ಕೊ*ಲೆ

Share It

ಮಡಿಕೇರಿ: ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಅಣ್ಣ ತಂಗಿಯ ಜೋಡಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕೊಡಗು ಜಿಲ್ಲೆಯ ಬಾಗಮಂಡಲುದ ಕುಂದಚೇರಿಯಲ್ಲಿ ನಡೆದಿದೆ.

ಮೃತರನ್ನು ರಾಮ (45) ಮತ್ತು ಯಶೋಧಾ (41) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಚಂದ್ರು (62) ಎನ್ನಲಾಗಿದೆ. ರಾಮ ಮತ್ತು ಚಂದ್ರು ನಡುವೆ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿತ್ತು. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ ಎನ್ನಲಾಗಿದೆ.

ಅಣ್ಣನ ಮೇಲೆ ಹಲ್ಲೆ ನಡೆಯುತ್ತಿದ್ದಾಗ ತಡೆಯಲು ಬಂದ ಯಶೋಧಾಗೂ ಮಚ್ಚಿನಿಂದ ಹಲ್ಲೆ ನಡೆಸಿದ ಚಂದ್ರು, ಆಕೆಯನ್ನು ಕೊಲೆ ಮಾಡಿದ್ದಾನೆ. ಬಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.


Share It

You cannot copy content of this page