ಉಪಯುಕ್ತ ಸುದ್ದಿ

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ವೈಜ್ಞಾನಿಕ ಕಾರ್ಯಕ್ರಮಗಳು ಸಹಕಾರಿ: ಎಂ.ಆರ್ ಉಮೇಶ್

Share It

ಹೊಸಕೋಟೆ : ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ವೈಜ್ಞಾನಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಎಂ.ಆರ್. ಉಮೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಸೂಲಿಬೆಲೆ ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಜಾಗತಿಕ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ವಿಜ್ಞಾನ ಹಾಗೂ ತಂತ್ರಜ್ಞಾನದ ಸಾಧನಗಳನ್ನು ಸದ್ಬಳಕೆ ಮಾಡಿಕೊಂಡು ಹೊಸ ಆವಿಷ್ಕಾರಗಳತ್ತ ಮುಂದಾಗಬೇಕು ಎಂದು ಹೇಳಿದರು.

ತಾಲೂಕು ಅಧ್ಯಕ್ಷ ರವಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿಯೂ ಸರ್ಕಾರ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿದ್ದು ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಪೋಷಕರು ಶಾಲೆ ಮತ್ತು ಮಕ್ಕಳ ನಡುವೆ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸಿ ಮಕ್ಕಳ ಶೈಕ್ಷಣಿಕ ಸಾಧನೆಗೆ ಬೆಂಬಲ ನೀಡಬೇಕು ಎಂದು ಹೇಳಿದರು. ಹೆಣ್ಣು–ಗಂಡು ಎಂಬ ಭೇದವಿಲ್ಲದೆ ಸಮಾನವಾಗಿ ಶಿಕ್ಷಣ ನೀಡಬೇಕು ಹಾಗೂ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಮುಂದಿನ ಪರೀಕ್ಷೆಗಳನ್ನು ಎದುರಿಸಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ವೈಜ್ಞಾನಿಕ ಸಂಶೋಧನಾ ಪರಿಷತ್ ಹೋಬಳಿ ಅಧ್ಯಕ್ಷ ನಯಾಜ್ ಖಾನ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಿನ್ಸಿಪಾಲ್ ವೆಂಕಟೇಶ್, ಮಾನವ ಹಕ್ಕುಗಳ ಜಾಗೃತಿ ಸಮಿತಿ ಮಹಿಳಾ ಅಧ್ಯಕ್ಷೆ ರಾಜೇಶ್ವರಿ, ಸಹಕಾರ ಬ್ಯಾಂಕ್ ಸಿಇಒ ವಸಂತ್ ,ಗೋಪಿನಾಥ್, ಪ್ರಶಾಂತ್, ಸೈಯದ್ ಮೆಹಬೂಬ್ ಸೇರಿದಂತೆ ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.


Share It

You cannot copy content of this page