ಬೀದರ್ : ಶಾಲಾ ಕಟ್ಟಡದ ಮೇಲಿಂದ ಕೆಳಗೆಬಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಶಾಲೆಯೊಂದರಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಾಲಾ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಇನ್ನೇನು ಮಾರ್ಚ್ ೧೭ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಬೇಕಿದ್ದು, ಪರೀಕ್ಷಾ ಸಿದ್ಧತೆಯಲ್ಲಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ವಿದ್ಯಾರ್ಥಿನಿಯ ಪೋಷಕರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕರನ್ನು ಬಂಧಿಸಿ ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅಂಶವನ್ನು ಪತ್ತೆಹಚ್ಚಲು ಪಯತ್ನ ಮಾಡುತ್ತಿದ್ದಾರೆ.

