ಬೆಂಗಳೂರು: ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದ ಉಂಟಾದ ಅನಿಲ ಅಭಾವದ ಪರಿಣಾಮವಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ, ಕಾಡುಗಳು, ಕಾಡಿನಂಚು ಹಾಗೂ ಸರ್ಕಾರಿ ಭೂಮಿಗಳಲ್ಲಿ ಅಕ್ರಮ ಮರ ಕಡಿತವಾಗದಂತೆ ಕಟ್ಟೆಚ್ಚರ ವಹಿಸಲು ಅರಣ್ಯ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಎಲ್ಲ ವಲಯಗಳಲ್ಲೂ ಗಸ್ತು ಹಾಗೂ ನಿಗಾವ್ಯವಸ್ಥೆಯನ್ನು ಬಲಪಡಿಸಲು ಆದೇಶಿಸಿದ್ದು, ಎಲ್ಲಿಯಾದರೂ ಅಕ್ರಮ ಮರ ಕಡಿತ ಕಂಡುಬಂದರೆ ಸಂಬಂಧಿತ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.

