ಧಾರವಾಡ: ಧಾರವಾಡ ನಗರದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಅವಧಿಗೆ ಮುನ್ನವೇ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ.
ಧಾರವಾಡ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದ್ದು, ಭಾರಿ ಪ್ರಮಾಣದ ಆಲಿಕಲ್ಲುಗಳು ಬಿದ್ದಿವೆ. ಸಂಜೆ ಇದ್ದಕ್ಕಿದ್ದಂತೆ ಸುರಿದ ಮಳೆಗೆ ವಾಹನ ಸವಾರರು ಹೈರಾಣಾಗಿದ್ದು, ಬೈಕ್ ಸವಾರರು ಪರಾಡುವಂತಾಗಿತ್ತು. ರಸ್ತೆಗಳಲ್ಲಿ ಅಲ್ಲಲ್ಲಿ ನೀರು ನಿಂತುಕೊAಡ ಕಾರಣ ಸಂಚಾರ ದಟ್ಟಣೆ ಹೆಚ್ಚಾಗಿತ್ತು.
ಬೇಸಿಗೆ ಮಳೆ ಇನ್ನು ಕೆಲ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆಯೇ ಇದೀಗ ಧಾರವಾಡದಲ್ಲಿ ಮಳೆಯಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಗಾಳಿ ಮತ್ತು ಆಲಿಕಲ್ಲಿ ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಙರು ಮಾಹಿತಿ ನೀಡಿದ್ದಾರೆ.

