ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್‌ಗಳು ಮೃತಪಟ್ಟಿದ್ದು, ಇಬ್ಬರು ಎಐಎಸ್‌ಐಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿ ಚಿತ್ರದುರ್ಗದಿಂದ ಬಳ್ಳಾರಿಗೆ ತೆರಳುತ್ತಿದ್ದ ಒಬ್ಬ ರಿಸರ್ವ್ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಇಬ್ಬರು ಎಎಸ್‌ಐಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಎಎಸ್‌ಐಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಶವಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಕರ್ತವ್ಯನಿಮಿತ್ತ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಹೇಳಲಾಗಿದೆ.

