ಅಪರಾಧ ಆರೋಗ್ಯ ಸುದ್ದಿ

ಆಸ್ಪತ್ರೆ ಟ್ರಾಮಾ ಕೇರ್ ಸೆಂಟರ್ ನಲ್ಲಿ ಬೆಂಕಿ ಅವಘಡ: ಹತ್ತು ರೋಗಿಗಳು ಸಾವು, ಹನ್ನೊಂದಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ

Share It

ನವದೆಹಲಿ: ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಟ್ರಾಮಾ ಕೇರ್ ಸೆ.ಟರ್ ಐಸಿಯು ನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಹತ್ತು ರೋಗಿಗಳು ಸಾವನ್ನಪ್ಪಿರುವ ಘಟನೆ ಒಡಿಸ್ಸಾದ ಕಟಕ್ ನಗರದಲ್ಲಿ ನಡೆದಿದೆ.

ನಗರದ ಪ್ರತಿಷ್ಠಿತ SCB ಆಸ್ಪತ್ರೆ ಟ್ರಾಮಾ ಕೇರ್ ಸೆಂಟರ್ ನ ICU ನಲ್ಲಿ ಬೆಳಗ್ಗಿನ ಜಾವ 2.30 ರಿಂದ 3 ಗಂಟೆ ಸುಮಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ನಿಖರ ಕಾರಣ ಪತ್ತೆಯಾಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯ ನಡೆಸಿ, ಕೆಲವರನ್ನು ರಕ್ಷಿಸಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಗಾಬರಿಯಾದ ರೋಗಿಗಳ ರಕ್ಷಣೆ ವೇಳೆ ಆಸ್ಪತ್ರೆಯ ಹ್ನೊಂದು ಜನ ಸಿಬ್ಬಂದಿಗೆ ಗಾಯವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

Updating…


Share It

You cannot copy content of this page