ಬೆಂಗಳೂರು: ಸಿಎಂ ಸ್ಥಾನದ ಜಿದ್ದಾಜಿದ್ದಿನ ನಡುವೆಯೇ ಸಂಪುಟ ವಿಸ್ತರಣೆ ಕೂಗು ಕೂಡ ಸದ್ದು ಮಾಡುತ್ತಿದ್ದು, ಪಂಚ ರಾಜ್ಯಗಳ ಚುನಾವಣೆಯ ನಂತರ ಸಂಪುಟ ವಿಸ್ತರಣೆ ಸಾಧ್ಯತೆಯಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿರುವ ಅವರು, ಸಂಪುಟದಲ್ಲಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂಬ ಬೇಡಿಕೆಯಿದೆ. ಹೀಗಾಗಿ, ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ಪುನಾರಚನೆ ಕಸರತ್ತು ನಡೆಯಲಿದೆ. ಆಗ ಹೊಸಬರಿಗೆ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ಸಿದ್ದರಾಮಯ್ಯ ಅವರ ಸಂಪುಟದ ಅರ್ಧದಷ್ಟು ಸಚಿವರು ರಾಜೀನಾಮೆ ನೀಡಿ, ಆ ಸ್ಥಾನಕ್ಕೆ ಹೊಸಬರ ನೇಮಕಕ್ಕೆ ಅವಕಾಶ ಮಾಡಿಕೊಡುತ್ತಾರೆ. ರಾಜೀನಾಮೆ ಕೊಟ್ಟ ಸಚಿವರು ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಅವರು ಹೇಳಿದ್ದಾರೆ.

