ಸುದ್ದಿ

Big Breaking: ನಳಂದದಲ್ಲಿ ಕಾಲ್ತುಳಿತ ಎಂಟು ಮಂದಿ ಸಾವು

Share It

ಪಾಟ್ನಾ: ಬಿಹಾರ ರಾಜ್ಯದ ನಳಂದದಲ್ಲಿರುವ ಶೀತಲ ಮಾತಾ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದ್ದು ಎಂಟು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಸರತಿ ಸಾಲಿನಲ್ಲಿ ದರ್ಶನಕ್ಕೆ ನಿಂತಿದ್ದು ಭಕ್ತರು ಏಕಾಏಕಿ ಸಾಲು ಬಿಟ್ಟು ಓಡಿದ ಪರಿಣಾಮ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಯಲ್ಲಿ ಸುಮಾರು ಎಂಟು ಜನರು ಜೀವ ಕಳೆದುಕೊಂಡಿದ್ದು, ಅನೇಕರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸುವ ಪ್ರಕ್ರಿಯೆ ನಡೆದಿದ್ದು, ಆಂಬ್ಯುಲೆನ್ಸ್‌ ಮೂಲಕ ಸಾಗಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕಾಗಮಿಸಿದ್ದು, ರಕ್ಷಣಾ ಕಾರ್ಯ ನಡೆಸಿದ್ದಾರೆ.

Updating….


Share It

You cannot copy content of this page