ಉಪಯುಕ್ತ ಸುದ್ದಿ

ಬಿರುಬೇಸಿಗೆಯ ಹಿನ್ನೆಲೆ : ಸರಕಾರಿ ಕಚೇರಿಗಳ ಸಮಯ ಬದಲಾವಣೆ !

Share It

ಬೆಂಗಳೂರು: ಬಿರುಬೇಸಿಗೆಯ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರಕಾರದ ಅಧೀನ ಕಾರ್ಯದರ್ಶಿ ಅವರು ಹೊರಡಿಸಿರುವ ಆದೇಶದ ಅನ್ವಯ 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ.ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಕಚೇರಿಯ ವೇಳಾಪಟ್ಟಿಯ ಬದಲಿಸಲಾಗಿದೆ.

ಪ್ರಸ್ತುತ ಆದೇಶದಂತೆ ಈ ಎರಡು ತಿಂಗಳಲ್ಲಿ ಕಚೇರಿಯ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಆರಂಭಿಸಿ, ಮಧ್ಯಾಹ್ನ 1.30ರವರೆಗೆ ನಿಗದಿಪಡಿಸಲಾಗಿದೆ. ಬದಲಾದ ಸಮಯದಲ್ಲಿ ಸರಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯಂತೆ ತುರ್ತು ಸಂದರ್ಭದಲ್ಲಿ ಯಾವುದೇ ಸಮಯದ ಮಿತಿಯಲ್ಲಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ.


Share It

You cannot copy content of this page