ಮುಂಬೈ: ಬಾಲಿವುಡ್‌ನ ಖ್ಯಾತ ಹಿರಿಯ ಗಾಯಕಿ ಆಶಾ ಬೋಸ್ಲೆ ವಯೋಸಹಜ ಖಾಯಿಲೆಯಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿತ್ತು. ಹೃದಯದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಮುಂಬೈನ ಬ್ರಿಜ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಧ್ಯಾಹ್ನ 12.45 ರಲ್ಲಿ ಆಶಾ ಬೋಸ್ಲೆ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್ ಸೇರಿದಂತೆ ಭಾರತದ ಬಹುತೇಖ ಭಾಷೆಗಳನ್ನು ಸಾವಿರಾರು ಹಾಡುಗಳಿಗೆ ಅವರು ಜೀವತುಂಬಿದ್ದರು.

