ಸುದ್ದಿ

ರಾಜ್ಯದ ವಿವಿಧೆಡೆ ₹18 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆ: 15,032 ಮಂದಿಗೆ ಉದ್ಯೋಗ

Share It

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಸೋಮವಾರ ನಡೆದ ಸಭೆಯಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳೂ ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.

11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14,906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3,523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1,982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ತಿಳಿಸಿದರು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ, ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Share It

You cannot copy content of this page