ಜಿಲ್ಲೆ ರಾಜಕೀಯ

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಡಾ. ಎಚ್.ಸಿ. ಮಹದೇವಪ್ಪ ಚಾಲನೆ

Share It

ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ದೇಶದ ಆರ್ಥಿಕತೆ, ನಿರುದ್ಯೋಗ, ನೀರಿನ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳಿಗೆ ಪರಿಹಾರವಿದೆ. ಅವುಗಳನ್ನು ಸಮಾನ್ಯ ಜನರಿಗೆ ಅರ್ಥವಾಗುವ ರೀತಿ ವಿಷಯಗಳನ್ನು ‌ತಿಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಬಾಬಾಸಾಹೇಬರ ಹುಟ್ಟಿನಿಂದ ಪರಿನಿರ್ವಾಣದವರೆಗೆ ಅವರ ಕಾಲಘಟ್ಟದ ಮುಖ್ಯ ಸಂಗತಿಗಳು ಸೇರಿದಂತೆ ಸಾಹು ಮಹಾರಾಜರು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರುಗಳ ಚಿಂತನೆಗಳನ್ನು‌ ಇಲ್ಲಿ ಅನಾವರಣವಾಗಬೇಕು ಎಂದು ಹೇಳಿದರು.

ಮೈಸೂರು ಐತಿಹಾಸಿಕ ಪ್ರವಾಸಿ ತಾಣವಾಗಿದ್ದು, ಥೀಮ್ ಪಾಕ್೯ ಹೆಚ್ಚಿನ‌ ಜನರನ್ನು ಆಕರ್ಷಿಸುವುದರ ಜೊತೆಗೆ ಹೊಸತನದಿಂದ ಕೂಡಿರಲಿ. ಪ್ರತಿಯೊಬ್ಬ ನಾಗರಿಕರು ಮೂಲಭೂತ ಹಕ್ಕುಗಳನ್ನು ಚಲಾಯಿಸುವ ಮೊದಲು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನೆನೆಯಬೇಕು. ಅವರು ನೀಡಿರುವ ಸಂವಿಧಾನದಿಂದ ನಾವು ಇಂದು ಉತ್ತಮ ಜೀವನ‌ ಜೀವಿಸುತ್ತಿದ್ದೇವೆ. ಮೈಸೂರಿನಲ್ಲಿ ನಿರ್ಮಾಣವಾಗುವ ಥೀಮ್ ಪಾಕ್೯ನ ನೀಲನಕ್ಷೆ ಮಾಡುವ ಮೊದಲು ನಿರ್ಮಾಣದ ಬಗ್ಗೆ ಮುಖ್ಯ ವ್ಯಕ್ತಿಗಳಿಂದ ಮಾಹಿತಿಗಳನ್ನು ಕ್ರೊಢೀಕರಿಸಿ ಉತ್ತಮವಾಗಿ ಮ್ಯೂಸಿಯಂ ಮೂಡಿಬರಲಿ ಎಂದು ತಿಳಿಸಿದರು.ಪ್ರತಿಯೊಬ್ಬರಿಗೂ ಸಮಾಜಿಕ ನ್ಯಾಯ ನೀಡಲು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದ ಬಗ್ಗೆ ಹಲವಾರು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವುಗಳು ಸಹ ಮ್ಯೂಸಿಯಂನಲ್ಲಿ ಅನಾವರಣವಾಗಲಿ. ಸಾಮಾನ್ಯ ಜನರಿಗೂ ಸಹ ಪ್ರತಿಯೊಂದು ವಿಷಯ ಸುಲಭವಾಗಿ ತಲುಪುವ ರೀತಿ ಇರಲಿ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್. ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೆ.ಆರ್. ರಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಇದ್ದರು‌.


Share It

You cannot copy content of this page