ಸುದ್ದಿ

ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

Share It

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ  ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ  ವಿಧಿಸಿ ನ್ಯಾಯಾಲಯದ ತೀರ್ಪು ನೀಡಿದೆ.
2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡರ್ ಹತ್ಯೆ ಪ್ರಕರಣವು ರಾಜ್ಯದ ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿತ್ತು. ಆರಂಭದಲ್ಲಿ ಸ್ಥಳೀಯ ಪೊಲೀಸರಿಂದ ತನಿಖೆ ನಡೆದಿದ್ದರೂ, ನಂತರ ಪ್ರಕರಣದ ಗಂಭೀರತೆಯನ್ನು ಗಮನಿಸಿ ಸಿಬಿಐ ತನಿಖೆಗೆ ಹಸ್ತಾಂತರಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ಆರೋಪಿಗಳಾಗಿ ಗುರುತಿಸಲಾಗಿದ್ದು, ಹಲವು ವರ್ಷಗಳ ವಿಚಾರಣೆಯ ನಂತರ ವಿಶೇಷ ನ್ಯಾಯಾಲಯವು  ಇರಡು ದಿನಗಳ ಹಿಂದೆ ಎಲ್ಲರನ್ನು ದೋಷಿಗಳೆಂದು ಘೋಷಿಸಿತ್ತು.  ಇಂದು ವಾದ ಪ್ರತಿವಾದ ಆಲಿಸಿದ ನ್ಯಾಯಾಧಿಶರು 17 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ  ವಿಧಿಸಿ ನಾಯಾಧಿಶರಾದ ಮಹತ್ವದ ಆದೇಶ ಹೊರಡಿಸಿದ್ದಾರೆ.


Share It

You cannot copy content of this page