ಅಪರಾಧ ಸುದ್ದಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 20 ಕಾರ್ಮಿಕರ ಸಾವು

Share It

ಬೆಂಗಳೂರು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20 ಕಾರ್ಮಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನನಲ್ಲಿ ನಡೆದಿದೆ.

ವಿರುಧನಗರ ಜಿಲ್ಲೆಯ ಕಟ್ಟನಾರಪಟ್ಟಿ ಪಟ್ಟಣದ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 20 ಕಾರ್ಮಿಕರು ಸಜೀವವಾಗಿ ದಹನವಾಗಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದಿಂದ ಕಟ್ಟಡಕ್ಕೆ ಹಾನಿಯಾಗಿದ್ದು, ಕಟ್ಟಡಗಳ ಅವಶೇಷಗಳಡಿ ಅನೇಕರು ಸಿಲುಕಿರುವ ಶಂಕೆಯಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂಬ ಶಂಕೆಯಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಪ್ರಯತ್ನ ನಡೆಸುತ್ತಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಸಿಎಂ ಎಂ.ಕೆ. ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.


Share It

You cannot copy content of this page