ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಇಟ್ಟುಕೊಂಡಿದ್ದ ಪೆನ್ನಿ ಡ್ರಗ್ಸ್ ಅನ್ನು ಬೆಳಗಾವಿ ಪೊಲೀಸರು ಪತ್ತೆಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ.
ನಾಗೇಶ್ ಭಗತ್ ಮತ್ತು ರಾಹುಲ್ ಜಾಧವ್ ಬಂಧಿತರು. ಇವರಿಂದ 13 ಗ್ರಾಂ ಪೆನ್ನಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಇವುಗಳ ಮೌಲ್ಯ ರೂ. 2.60 ಲಕ್ಷ ಎಂದು ಅಂದಾಜಿಸಲಾಗಿದೆ. ಇವರಿಂದ ಎರಡು ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ನಾಗೇಶ್ ಭಗತ್ ಮುಂಬೈಯಿಂದ ಡ್ರಗ್ಸ್ ತರಿಸಿಕೊಂಡು ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಕಾಕತಿ ಪೊಲೀಸರು ದಾಳಿ ನಡೆಸಿ ಇವರನ್ನು ಬಂಧಿಸಿದ್ದಾರೆ.

