ಜಿಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಅಪಘಾತ: 44 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

Share It

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಬಳಿ ಮಂಗಳವಾರ ಬೆಳಿಗ್ಗೆ ಕಲ್ಯಾಣ ಕರ್ನಾಟಕ ಸಾರಿಗೆ (ಕೆಕೆಆರ್‌ಟಿಸಿ) ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ 44 ಜನರು ಪ್ರಯಾಣಿಸುತ್ತಿದ್ದರು. ಬಳ್ಳಾರಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಸಾರಿಗೆ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದೆ. ಬಸ್‌ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾಹಿತಿಯ ಪ್ರಕಾರ, ಐದು ಮಂದಿ ಗಾಯಗೊಂಡವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬಸ್ ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.


Share It

You cannot copy content of this page