ಜಿಲ್ಲೆ

ಬಳ್ಳಾರಿ: ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​- 25 ಕ್ಕೂ ಹೆಚ್ಚು ಹುಲ್ಲಿನ ಬಣವೆ ಭಸ್ಮ

Share It

ಬಳ್ಳಾರಿ: ತಾಲೂಕಿನ ಚಾಗನೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, 25 ಕ್ಕೂ ಹೆಚ್ಚು ಹುಲ್ಲಿನ ಬಣವೆಗಳು ಸುಟ್ಟು ಭಸ್ಮವಾಗಿವೆ.

ಚಾಗನೂರು ಗ್ರಾಮದಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಕವಾಗಿ ಹರಡಿ ಹುಲ್ಲಿನ ಬಣವೆಗಳು ಹೊತ್ತಿಕೊಂಡಿವೆ. ನೋಡ ನೋಡುತ್ತಿದ್ದಂತೆ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿತ್ತು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು.

ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಹಲವು ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಹುಲ್ಲಿನ ಬಣವೆಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ. ಪಿಡಿಐಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Share It

You cannot copy content of this page