ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಮಹಾನಗರ ಪಾಲಿಕೆಯ 12 ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ ಇ-ಖಾತಾ ಪೆಂಡಿಂಗ್ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲಾಗಿದೆ.
ಲೋಕಾಯುಕ್ತ ನ್ಯಾಯಮೂರ್ತಿ ಜಿ.ಎಸ್. ಪಾಟೀಲ್ ಅವರ ಸೂಚನೆ ಮೇರೆಗೆ ದಾಳಿ ನಡೆಸಿದ್ದು, ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

