ಬೆಂಗಳೂರು: ಬಿಟ್ ಕಾಯಿಲ್ ಹಗರಣದ ಸಂಬಂಧ ಮತೊಂದು ದಾಳಿ ನಡೆದಿದ್ದು, ಇಡಿ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಮುಖ ಆರೋಪಿ ಶ್ರೀಕಿ ಮತ್ತು ಆತನ ಸಂಪರ್ಕದಲ್ಲಿರುವ ಇಬ್ಬರನ್ನು ಬಂಧಿಸಿ, ನೆನ್ನೆ ರಾತ್ರಿಯೇ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು, ಅವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಆರೋಪಿಗಳಿಗೆ ನ್ಯಾಯಾಲಯ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದೀಗ ಇಡಿ ಅಧಿಕಾರಿಗಳು ಶ್ರೀಕಿ ಸಂಪರ್ಕದಲ್ಲಿರುವವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಸುನೀಶ್ ಹೆಗ್ಡೆ, ರಾಬಿನ್ ಖಂಡೇವಾಲಾ ಬಂಧಿತ ಇನ್ನಿಬ್ಬರು ಆರೋಪಿಗಳಾಗಿದ್ದಾರೆ.

