ಅಪರಾಧ ಸುದ್ದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ : ನಾಲ್ವರ ಸಾವು

Share It

ತುಮಕೂರು: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.

ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.


Share It

You cannot copy content of this page