ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ಪಾದಯಾತ್ರೆ ನಡೆಸುವ ಭಕ್ತಾಧಿಗಳ ಮೇಲೆ ಚಿರತೆ ಪದೇಪದೆ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾಲುದಾರಿಯನ್ನು ಬಂದ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ.
ನೆನ್ನೆಯಷ್ಟೇ ಪುಟ್ಟ ಬಾಲಕನನ್ನು ಚಿರತೆ ಕೊಂದು ಹಾಕಿತ್ತು. ಪೋಷಕರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪದೇಪದೆ ದಾಳಿಗಳಾಗುತ್ತಿದ್ದರೂ, ಅರಣ್ಯ ಇಲಾಖೆ ಚಿರತೆಯನ್ನು ಹಿಡಿಯುವ ಕೆಲಸ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ನಾಲ್ಕೈದು ತಿಂಗಳಲ್ಲಿ ಪದೇಪದೆ ಚಿರತೆ ದಾಳಿ ನಡೆಯುತ್ತಿದೆ. ಚಿರತೆಯನ್ನು ಸೆರೆಹಿಡಿಯುವ ಪ್ರಯತ್ನವನ್ನು ಅರಣ್ಯ ಇಲಾಖೆ ನಡೆಸುತ್ತಿದೆಯಾದರೂ, ಪ್ರಯೋಜನವಾಗುತ್ತಿಲ್ಲ.

