ಅಪರಾಧ ಸುದ್ದಿ

ನಾಗರಿಕರ ದೂರುಗಳನ್ನು ಕಡೆಗಣಿಸಿದ ಪೊಲೀಸ್ ಠಾಣಾಧಿಕಾರಿಗಳಿಗೆ ಸೀಮಾಂತ್ ಕುಮಾರ್ ಎಚ್ಚರಿಕೆ

Share It

ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್ ಅವರು, ತಮ್ಮ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಬರುವ ದೂರುಗಳಿಗೆ ಸೂಕ್ತವಾಗಿ ಸ್ಪಂದಿಸದಿರುವ ಠಾಣಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮುನ್ನೆಚ್ಚರಿಕೆಯನ್ನು ನೀಡಿದ್ದಾರೆ.

ಮೇ ೧೬ರಂದು ನಡೆದ ನಗರ ಪೊಲೀಸ್ ಠಾಣೆಗಳ ತಿಂಗಳ ಕವಾಯತಿನ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ದೂರನ್ನೂ ಗಂಭೀರವಾಗಿ ಪರಿಗಣಿಸಬೇಕು ಮತ್ತು ಅದರ ಪರಿಹಾರಕ್ಕೆ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು. ಈ ನಿಯಮವನ್ನು ಪಾಲಿಸದ ಠಾಣೆ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ಸೇರಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಅವರು ಸ್ಪಷ್ಟಪಡಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ಷ್ಮವಾಗಿ ಪ್ರತಿಕ್ರಿಯಿಸುವುದು ಪೊಲೀಸ್ ಇಲಾಖೆಯ ಮೂಲ ಕರ್ತವ್ಯವಾಗಿದೆ ಎಂದು ಅವರು ಆಜ್ಞಾಪಿಸಿದರು.


Share It

You cannot copy content of this page