ಅಪರಾಧ ಸುದ್ದಿ

ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದು ಕೋರಿ ಕೋರ್ಟ್​ಗೆ ಪೊಲೀಸರ ಮನವಿ

Share It

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಹರಿಹರದ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಪಡೆದ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಪೊಲೀಸರು ಕೋರ್ಟ್​ಗೆ ಮನವಿ ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಮುಚ್ಚಿದ ಲಕೋಟೆಯಲ್ಲಿ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಈ ಕುರಿತು ವರದಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಜಾಮೀನು ರದ್ದಾದರೆ ಸ್ವಾಮೀಜಿ ಯಾವುದೇ ಕ್ಷಣದಲ್ಲಾದರೂ ಅರೆಸ್ಟ್ ಆಗುವ ಸಾಧ್ಯತೆ ಇದೆ.‌ ತಮ್ಮ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಪ್ರಕರಣ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆದಿದ್ದರು.

ಈ ಕುರಿತು ಹರಿಹರ ಗ್ರಾಮಾಂತರ ಠಾಣೆಯ ಪಿಐ, ತನಿಖಾಧಿಕಾರಿ ಸುರೇಶ್ ಸಗರಿ ಅವರು ಮಾತನಾಡಿ, “ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ನಿರೀಕ್ಷಣಾ ಜಾಮೀನು ರದ್ದು ಕೋರಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಅವರು ಮೇ 25ರಂದು ಮತ್ತೊಮ್ಮೆ ವಿಚಾರಣೆಗಾಗಿ ಠಾಣೆಗೆ ಹಾಜರಾಗಲಿದ್ದಾರೆ” ಎಂದು ತಿಳಿಸಿದರು.


Share It

You cannot copy content of this page