ಬೆಂಗಳೂರು: ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸಕ್ಕೆ ಹೋರಾಡುತ್ತಿದ್ದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮನೆ ಮಾಡಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕರೆ ಮಾಡಿದ್ದು, ನಾಳೆ 11 ಗಂಟೆಗೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಯಾವ ಕಾರಣಕ್ಕೆ ಎಂಬುದು ಗೊತ್ತಾಗಿಲ್ಲ, ನಾನಂತೂ ದೆಹಲಿಗೆ ತೆರಳುತ್ತಿದ್ದೇನೆ. ಇದರಲ್ಲಿ ವಿಶೇಷ ಅನು ಇಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು ನನ್ನನ್ನು ಹೈಕಮಾಂಡ್ ಕರೆದಿಲ್ಲ. ನನ್ನನ್ನು ಕರೆದರೆ ನಾನು ಕಿದ ದೆಹಲಿಗೆ ಹೋಗುತ್ತೇನೆ ಎಂದು ಅವರು ತಿಳಿಸಿದ್ದಾರೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.

