ಚಿಕ್ಕಮಗಳೂರು: ವೇಗವಾಗಿ ಚಲಿಸುತ್ತಿದ್ದ ಇನ್ನೋವಾ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕೊಟ್ಟಿಗೇನಹಳ್ಳಿ ಸಮೀಪ ನಿಯಂತ್ರಣ ತಪ್ಪಿದ ಕಾರು ಹೊಲದೊಳಗೆ ನುಗ್ಗಿ ಪಲ್ಟಿಯಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಕಾರಿನಲ್ಲಿದ್ದ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಬೇಲೂರಿನಿಂದ ಅರಸೀಕೆರೆಗೆ ಹೋಗುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

