ಸುದ್ದಿ

ಕೊಪ್ಪಳ: ತುಂಗಭದ್ರಾ ಡ್ಯಾಂಗೆ ರಾಮಲಿಂಗಾರೆಡ್ಡಿ ಭೇಟಿ – ಹೊಸ ಕ್ರಸ್ಟ್ ಗೇಟ್ ಉದ್ಘಾಟನೆ ಪೂರ್ವ ಪರಿಶೀಲನೆ

Share It

ಕೊಪ್ಪಳ: ತುಂಗಭದ್ರಾ ಅಣೆಕಟ್ಟಿಗೆ ಅಳವಡಿಸಲಾದ ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಅಂತಿಮ ಹಂತದಲ್ಲಿವೆ.

ರಾಜ್ಯದ ಜಲಸಂಪನ್ಮೂಲ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ಅವರು ಇಂದು ತುಂಗಭದ್ರಾ ಡ್ಯಾಂಗೆ ಭೇಟಿ ನೀಡಿ, ಇದೇ ತಿಂಗಳು 25ರಂದು ನಡೆಯಲಿರುವ ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದ ಪೂರ್ವ ಸಿದ್ಧತೆಗಳನ್ನು ಸ್ಥಳದಲ್ಲೇ ಪರಿಶೀಲಿಸಿದರು.

ಸಚಿವರೊಂದಿಗೆ ತುಂಗಭದ್ರಾ ಅಚ್ಚುಕಟ್ಟು ಕಾಡಾ ಅಧ್ಯಕ್ಷರಾದ ಹಸನ್ ಸಾಬ್ ದೋಟಿಹಾಳ, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ ಹಾಗೂ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹೊಸ ಕ್ರಸ್ಟ್ ಗೇಟ್‌ಗಳ ಕಾರ್ಯಾಚರಣೆ, ಸುರಕ್ಷತಾ ವ್ಯವಸ್ಥೆ ಮತ್ತು ಉದ್ಘಾಟನಾ ಕಾರ್ಯಕ್ರಮದ ವ್ಯವಸ್ಥೆಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಹೊಸ ಗೇಟ್‌ಗಳಿಂದ ಅಣೆಕಟ್ಟಿನ ನೀರು ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟರು.


Share It

You cannot copy content of this page