ಸಿಬಿಎಸ್‌ಸಿ 12 ನೇ ತರಗತಿ ಫಲಿತಾಂಶ: ಬಾಲಕಿಯರದ್ದೇ ಮೇಲುಗೈ
ಬೆಂಗಳೂರು: ಕೇಂದ್ರೀಯ ಪರೀಕ್ಷಾ ಮಂಡಳಿಯ ಸಿಬಿಎಸ್‌ಸಿ 2024 ನೇ ಸಾಲಿನ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಪರೀಕ್ಷೆ ಬರೆದವರಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, ಕಳೆದ ವರ್ಷದ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ, ಶೇ/0.65 ರಷ್ಟು ಹೆಚ್ಚಾಗಿದೆ ಎಂದು ಸಿಬಿಎಸ್‌ಸಿ ತಿಳಿಸಿದೆ.
ಶೇ.91 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗುವ ಮೂಲಕ ಮತ್ತೊಮ್ಮೆ ಬಾಲಕಿಯರದ್ದೇ ಮೇಲುಗೈ ಆಗಿದೆ. ಈ ವರ್ಷ ಒಟ್ಟು 16,21,224 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ತೇರ್ಗಡೆಯಾದವರ ಪೈಕಿ 24 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. 1.16 ಲಕ್ಷ ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.