ರಾಜಕೀಯ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಅವಹೇಳನಕಾರಿ ಪೋಸ್ಟ್‌ಗಳನ್ನು ಹರಿಬಿಟ್ಟ ಬಿಜೆಪಿ ಬೆಂಬಲಿಗನ ವಿರುದ್ಧ ದೂರು; FIR ದಾಖಲು

Share It

ಬೆಂಗಳೂರು: ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ, ಮಾನಹಾನಿಕರ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹರಿಬಿಟ್ಟ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿಗನ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು FIR ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕುಶಲ್ ಹರುವೇಗೌಡ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಜಕೀಯ ಭಿನ್ನಾಭಿಪ್ರಾಯಗಳ ಹೆಸರಿನಲ್ಲಿ ವ್ಯಕ್ತಿಗತ ನಿಂದನೆ, ಸುಳ್ಳು ಆರೋಪಗಳು ಹಾಗೂ ಸಮಾಜದಲ್ಲಿ ದ್ವೇಷ ಹರಡುವ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ಕಾನೂನನ್ನು ಕೈಗೆತ್ತಿಕೊಳ್ಳುವ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Share It

You cannot copy content of this page