ಅಪರಾಧ ಸುದ್ದಿ

ಟ್ರಕ್‌ಗೆ ಹಿಂದಿನಿಂದ ಕಾರು ಡಿಕ್ಕಿ : ಒಂದೇ ಕುಟುಂಬದ ಐವರ ಸಾವು

Share It

ಮಹಾರಾಷ್ಟ್ರ: ರಾಜ್ಯದ ಅಮರಾವತಿ ಜಿಲ್ಲೆಯ ಧಮನ್‌ಗಾಂವ್ ರೈಲ್ವೆ ತಾಲೂಕಿನ ಮೂಲಕ ಹಾದುಹೋಗುವ ಸಮೃದ್ಧಿ ಮಹಾಮಾರ್ಗ್‌ನಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಚಂದ್ರಾಪುರದಿಂದ ಅಕೋಲಾಕ್ಕೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಮುಂದೆ ಚಲಿಸುತ್ತಿದ್ದ ಟ್ರಕ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಕಾರಿನಲ್ಲಿದ್ದ ಪ್ರಯಾಣಿಕರೆಲ್ಲರೂ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಭಾಸ್ಕರ್ ಜೀವನೆ, ರಮೇಶ್ ಜೀವನೆ, ಲತಾ ಜೀವನೆ, ಆರತಿ ಜೀವನೆ ಮತ್ತು ಹತ್ತು ವರ್ಷದ ತ್ರಿಶಾ ಜೀವನೆ ಎಂದು ಪೊಲೀಸರು ಗುರುತಿಸಿದ್ದಾರೆ.

ಚಂದ್ರಾಪುರದ ಈ ಕುಟುಂಬವು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಕಾರಿನಲ್ಲಿ ಅಕೋಲಾಕ್ಕೆ ಹೊರಟಿತ್ತು ಎಂಬ ಮಾಹಿತಿ ದೊರೆತಿದೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಹೆದ್ದಾರಿ ಸುರಕ್ಷತಾ ದಳ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಆಗಮಿಸಿದ್ದವು. ಶವಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.


Share It

You cannot copy content of this page