ಭದ್ರಾವತಿ: ಎಸ್ಐಆರ್ ನಡೆಸುವ ವೇಳೆ ಬಿಎಲ್ಒ ವೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ಎಸ್ಐಆರ್ ಪ್ರಕ್ರಿಯೆ ನಡೆಸುವ ವೇಳೆ ಮಂಜುಳಾ ಎಂಬ ಬಿಎಲ್ಒ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನುಯ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಲಾಗಿತ್ತು.
ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆದಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದಿಂದ ಅವರಿಗೆ ಹೃದಯಾಘಾತವಾಗಿರಬಹುದು ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

