ಉಪಯುಕ್ತ ಸುದ್ದಿ

ವಿವಿಧ ಇಲಾಖೆಗಳ 4,723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಕೆಇಎ

Share It

ಬೆಂಗಳೂರು : ವಿವಿಧ ಇಲಾಖೆಗಳ ಒಟ್ಟು 4,723 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. 

ಈ ಕುರಿತು ಪ್ರಕಟನೆ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, 4,723 ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ ಸೇರಿವೆ. ಗ್ರಾಮ ಆಡಳಿತ ಅಧಿಕಾರಿಯ 572, ಸರ್ವೆ ಇಲಾಖೆಯ 750 ಭೂಮಾಪಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುವ ಶಾಲೆಗಳ 1,087 ಶಿಕ್ಷಕರು ಹಾಗೂ 2,314 ಕೆಎಸ್‍ಆರ್‍ಪಿ ಪೊಲೀಸ್ ಕಾನ್ಸ್‌ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. 

ಕಲ್ಯಾಣ ಕರ್ನಾಟಕ ವೃಂದಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಹುದ್ದೆಗಳಿಗೂ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗಿದೆ. ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದಲೇ ಆರಂಭವಾಗಿದೆ. ಅರ್ಹರು ಅಧಿಸೂಚನೆಯನ್ನು ಓದಿ, ಅನ್ವಯವಾಗುವ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ. 

ಅಧಿಸೂಚನೆಯಲ್ಲೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದು ಅದರ ಪ್ರಕಾರ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ಇರುವ ಕೊನೆ ದಿನಾಂಕವನ್ನು ನೋಡಿಕೊಂಡು ನಿಗದಿತ ದಿನದೊಳಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಬೇಕು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‍ಸೈಟ್‍ಗೆ ಭೇಟಿ ನೀಡುವಂತೆ ಅವರು ಸಲಹೆ ನೀಡಿದ್ದಾರೆ.


Share It

You cannot copy content of this page