ಬೆಂಗಳೂರು: ಶ್ರವಣ ಬೆಳಗೊಳದಲ್ಲಿ ನಿರ್ಮಾಣವಾಗಿರುವ ಪ್ರಾಕೃತ ವಿಶ್ವ ವಿದ್ಯಾನಿಲಯ ಹಾಗೂ ವಿವಿಧ ಕಾಮಗಾರಿ ಉದ್ಘಾಟನೆಗೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಶ್ರೀ ಮಠದ ನಿಯೋಗ ಆಹ್ವಾನ ಮಾಡಿತು.
ಮಠದ ನಿಯೋಗದಲ್ಲಿ ಶ್ರವಣ ಬೆಳಗೊಳ ಶಾಸಕ ಸಿ ಎನ್ ಬಾಲಕೃಷ್ಣ ಇದ್ದು, ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್, ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹಾಗೂ ಇತರರು ಇದ್ದರು
ಶ್ರೀ ಕ್ಷೇತ್ರ ಶ್ರವಣಬೆಳಗೊಳದಲ್ಲಿ ನಿರ್ಮಾಣ ಗೊಂಡಿರುವ ಪ್ರಾಕೃತ ವಿಶ್ವ ವಿದ್ಯಾನಿಲಯ, ನೂತನ ಭೋಜನ ಶಾಲೆ ಹಾಗೂ ಆಡಿಟೋರಿಯಂ ಕಟ್ಟಡಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಮನವಿ ಮಾಡಿದರು.

