ಅಪರಾಧ ಕ್ರೀಡೆ ಸುದ್ದಿ

ಬೆಂಗಳೂರು RCB ಕಾಲ್ತುಳಿತ ಪ್ರಕರಣ: ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳು ಆರೋಪ ಮುಕ್ತ

Share It

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ನಗರದ ಅಂದಿನ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖೆ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿದ್ದು, ಮೂವರು ಅಧಿಕಾರಿಗಳು ಆರೋಪ ಮುಕ್ತರಾಗಿದ್ದಾರೆ. 

ಹಿಂದಿನ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹಾಗೂ ಪೊಲೀಸ್ ಮಹಾ ನಿರೀಕ್ಷಕರಾಗಿದ್ದ ವಿಕಾಸ್ ಕುಮಾರ್, ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್. ತಕ್ಕಣ್ಣವರ್ ವಿರುದ್ಧ ಇಲಾಖೆ ತನಿಖೆಗೆ ಆದೇಶ ಮಾಡಿರುವುದನ್ನು ಕೈ ಬಿಟ್ಟಿದೆ. 

ಪ್ರಕರಣದ ಹಿನ್ನೆಲೆ: ಐಪಿಎಲ್ ಪಂದ್ಯದಲ್ಲಿ ಗೆಲುವು ಸಾಧಿಸಿದ್ದ ಆರ್‌ಸಿಬಿ ತಂಡದ ವಿಜಯೋತ್ಸವದ ನಿಮಿತ್ತ ನಗರದಲ್ಲಿ 2025ರ ಜೂನ್ 4ರಂದು ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಈ ಘಟನೆ ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರವು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳಡಿ ಶಿಸ್ತು ಕ್ರಮ ಆರಂಭಿಸುವ ಉದ್ದೇಶದಿಂದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿತ್ತು. ನಂತರ 2025ರ ಜುಲೈ 28ರಂದು ಅವರ ಅಮಾನತು ಆದೇಶ ಹಿಂಪಡೆದು, ಇಲಾಖಾ ವಿಚಾರಣೆ ಮುಂದುವರಿಸಲು ಅವಕಾಶ ನೀಡಲಾಗಿತ್ತು.


Share It

You cannot copy content of this page