ರಾಜಕೀಯ ಸುದ್ದಿ

ಜುಲೈ 19- 20 ರಂದು ಸಂಪುಟ ವಿಸ್ತರಣೆ: ನಾಳೆ ಸಂಪುಟ ವಿಸ್ತರಣೆ ಸಂಬಂಧ ಸಭೆ

Share It

ಬೆಂಗಳೂರು: ಜುಲೈ 20ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಲಿದ್ದು, ನಾಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಂಪುಟ ವಿಸ್ತರಣೆ ಸಂಬಂಧದ ಚರ್ಚೆಯ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು, ಇಂದು ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜತೆಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಕೂಡ ಭಾಗವಹಿಸಲಿದ್ದು, ಅವರು ಸಂಜೆ 6.20ಕ್ಕೆ ಇಂಡಿಗೋ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಸಂಜೆ ಏಳು ಗಂಟೆಗೆ ಸಿಎಂ ಮತ್ತು ಮಾಜಿ ಸಿಎಂ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.

ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜತೆಗೆ ಮಹತ್ವದ ಚರ್ಚೆ ನಡೆಯಲಿದೆ. ಅನಂತರ ಸಭೆಯ ವಿವರವನ್ನು ರಾಹುಲ್ ಗಾಂಧಿಯವರಿಗೆ ಸಲ್ಲಿಸಿ ಗ್ರೀನ್ ಸಿಗ್ನಲ್ ಪಡೆಯಲು ನಿರ್ಧಾರ ಮಾಡಲಾಗಿದೆ.


Share It

You cannot copy content of this page