ಬೆಳಗಾವಿ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜೊಡಿ ಹತ್ಯೆಯಾದ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿರುವದು ಬೆಳಕಿಗೆ ಬಂದಿದೆ. ಬಸಪ್ಪ ಫಕ್ಕೀರಪ್ಪ ರಾಯಣ್ಣವರ (35) ಹಾಗೂ ಲಗಮಪ್ಪ ಫಕ್ಕೀರಪ್ಪ ರಾಯಣ್ಣವರ (34) ಹತ್ಯೆಯಾದವರು ಎಂದು ಗುರುತಿಸಲಾಗಿದೆ.
ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಘಟನೆಯ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಘಟನೆಯ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

