ಅಪರಾಧ ಸುದ್ದಿ

ವಿದ್ಯಾರ್ಥಿಗಳ ಮೇಲೆ ದಾಳಿ : ಲೋಕಸಭೆಯಲ್ಲಿ ಚರ್ಚೆಗೆ ಅವಕಾಶ ಕೋರಿ ಸ್ಫೀಕರ್‌ಗೆ ರಾಹುಲ್ ಗಾಂಧಿ ಪತ್ರ

Share It

ನವದೆಹಲಿ: ಸಂಸತ್ ಚಲೋ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದಾಳಿಯ ಕುರಿತು ಸಂಸತ್‌ನಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಸ್ಫೀಕರ್‌ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

ನಿಯೋಗದ ಜತೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಸ್ಫೀಕರ್ ಓಂಪ್ರಕಾಶ್ ಬಿರ್ಲಾ ಅವರನ್ನು ಭೇಟಿ ಮಾಡಿ, ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಯುವಜನರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಬೇಕಿದೆ. ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಆದರೆ, ಸರಕಾರದ ಅನುಮತಿ ಪಡೆದು ಅನಂತರ ಅವಕಾಶ ನೀಡುವುದಾಗಿ ಸ್ಫೀಕರ್ ಹೇಳಿದ್ದಾರೆ ಎಂದು ರಾಹುಲ್ ಗಾಂಧಿ, ಹೊರಗೆ ಬಂದ ನಂತರ ತಿಳಿಸಿದ್ದು, ವಿದ್ಯಾರ್ಥಿಗಳ ಬೇಡಿಕೆಯಂತೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲೇಬೇಕು. ಆದರೆ, ಇಂತಹ ನ್ಯಾಯಯಿತ ಬೇಡಿಕೆ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದ ಯುವಜನತೆಯ ಮೇಲೆ ನಡೆದಿರುವ ದಾಳಿಗೆ ಸಂಬಂಧಿಸಿ, ಗೃಹ ಸಚಿವರು ಹಾಗೂ ಪ್ರಧಾನಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಇಷ್ಟೊಂದು ದೊಡ್ಡ ಮಟ್ಟದ ಹೋರಾಟ ನಡೆಸುತ್ತಿದ್ದರೂ ಮೌನವಹಿಸಿರುವುದು ಏಕೆ ಎಂದು ಪ್ರಶ್ನೆ ಮಾಡಿದ ಅವರು, ಇದಕ್ಕೆ ಪ್ರಧಾನಿ ಉತ್ತರ ಕೊಡಬೇಕು. ದೇಶದ ಯುವಜನತೆಯ ಕ್ಷಮೆ ಕೇಳಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದೇ ವಿಚಾರದಲ್ಲಿ ಸರಕಾರ ಮತ್ತು ವಿಪಕ್ಷಗಳ ನಡುವೆ ವಾಗ್ವಾದ ಶುರುವಾಗಿದ್ದು, ಕಲಾಪವನ್ನು ಮುಂದೂಡಲಾಗಿದೆ.


Share It

You cannot copy content of this page