ರಾಜಕೀಯ ಸುದ್ದಿ

ಕಾವೇರಿ ವಿವಾದ: ಭಾನುವಾರ ಸರ್ವ ಪಕ್ಷಗಳ ಸಭೆ

Share It

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಸಂಬಂಧ ಚರ್ಚೆ ನಡೆಸಲು ಸರ್ವಪಕ್ಷಗಳ ಸಭೆಯನ್ನು ಸಿಎಂ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಕರೆದಿದ್ದಾರೆ.

ಭಾನುವಾರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಸಭೆ ನಿಗದಿಯಾಗಿದ್ದು, ಸಭೆಗೆ ಸರ್ವ ಪಕ್ಷಗಳ ಮುಖಂಡರಿಗೆ ಆಹ್ವಾನ ನೀಡಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ವಿಶೇಷ ಕರ್ತ್ಯವ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುಖ್ಯಮಂತ್ರಿಗಳು ಸರ್ವಪಕ್ಷ ಸಭೆ ಕರೆದಿರುವುದನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ಇಂತಹ ಬಿಕ್ಕಟ್ಟು ಸೃಷ್ಟಿಯಾದ ಎಲ್ಲ ಸಂದರ್ಭದಲ್ಲಿ ಸರ್ವ ಪಕ್ಷಗಳ ಸಭೆ ನಡೆಸಿ, ಸಲಹೆ ಪಡೆಯುವುದು ರಾಜ್ಯದಲ್ಲಿ ನಡೆದುಕೊಂಡು ಬಂದಿರುವ ಪ್ರತೀತಿ ಎಂದಿದ್ದಾರೆ.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರ ಮತ್ತು ಮಂಡಳಿಗಳು ರಾಜ್ಯದ ವಾಸ್ತವ ಸ್ಥಿತಿಯನ್ನು ಮನಗಂಡು ಆದೇಶ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.


Share It

You cannot copy content of this page