ಶಿವಮೊಗ್ಗ: ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಗುಡ್ಡಕುಸಿದು 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯ ಸಿಬಿನಕೆರೆ ಸಮೀಪದ ಗಾಂಧಿನಗರದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಮಲ್ಲಿಕಾರ್ಜುನ (35), ಪತ್ಬಿ ನಾಗವೇಣಿ(28) ಹಾಗೂ 3 ವರ್ಷದ ಮಗು ಸಂತೋಷ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶೆಡ್ನಲ್ಲಿ ವಾಸವಾಗಿದ್ದವರ ಮೇಲೆ ಗುಡ್ಡ ಕುಸಿತವಾಗಿದೆ. ಇವರನ್ನು ರಕ್ಷಿಸಲು ಪ್ರಯತ್ನಿಸಿದ ಓರ್ವ ಗಾಯಗೊಂಡಿದ್ದು, ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಹಾಗೂ ತೀರ್ಥಹಳ್ಳಿ ಪೊಲೀಸರು ಆಗಮಿಸಿ, ಕಾರ್ಯಾಚರಣೆ ನಡೆಸಿದ್ದಾರೆ. ಶೆಡ್ನಲ್ಲಿ ಬೇರೆವರು ಇದ್ದಾರೆಯೇ ಎಂದು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದೆ. ಶೆಡ್ನಲ್ಲಿ ಮಲಗಿದ್ದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿ ಅವಶೇಷಗಳ ಅಡಿಯಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

