ಬೆಂಗಳೂರು:ತಮಿಳು ನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪಕ್ಷಗಳು ಒಗ್ಗಟ್ಟು ಪ್ರದರ್ಶನ ನಡೆಸಿದ್ದು, ಯಾವುದೇ ಕಾರಣಕ್ಕೂ ನೀರು ಹರಿಸದಂತೆ ಕ್ರಮವಹಿಸಲು ಮುಂದಾಗಿವೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿ, ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಇದಕ್ಕೆ ನಾವೆಲ್ಲ ಜತೆಯಾಗಿರುತ್ತೇವೆ ಎಂದು ಭರವಸೆ ನೀಡಿದರು.
ಸಭೆಯಲ್ಲಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಎಲ್ಲ ಪಕ್ಷದ ನಾಯಕರ ಅಭಿಪ್ರಾಯವನ್ನು ಪಡೆದುಕೊಳ್ಳಲಾಯಿತು. ಈ ವಿಚಾರದಲ್ಲಿ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧವಾಗಿರುತ್ತೇವೆ ಎಂದು ತಿಳಿಸಿದ್ರು.

